ಹುಬ್ಬಳ್ಳಿ : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಿಸದೇ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಪೂರ್ಣ (೫) ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಬಾಲಕಿ ಪೂರ್ಣಗೆ ಕಳೆದ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಕಾರಿಯಾಗದೇ ನಿನ್ನೆ ರಾತ್ರಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.