ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಸಂಬಂಧ ಪ್ರಸ್ತಾವನೆ ಬಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಬಂದಿರುವುದು ನಿಜ. ಅದರಲ್ಲೇನಿದೆ ಎಂದು ನೋಡಿಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಬಸ್ ಟಿಕೆಟ್ ದರ ಏರಿಕೆಗೆ ಸಾರಿಗೆ ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಬಗ್ಗೆ ಬಸ್ ಟಿಕೆಟ್ ದರ ಏರಿಕೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಕೆಎಸ್ ಆರ್ ಟಿಸಿ ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳವಾಗಿವೆ. ಹೀಗಾಗಿ ಬಸ್ ಟಿಕೆಟ್ ದರ ಶೇಕಡ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಪ್ರಸ್ತಾವನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಶೀಘ್ರವೇ ಬಸ್ ಟಿಕೆಟ್ ದರ ಏರಿಕೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.