ಬೆಂಗಳೂರು : ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಮೂಲಗಳು ತುಂಬಿ ಹರಿಯುತ್ತಿವೆ. ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿರುವ ಸಮೃದ್ಧಿಯ ಸಂಕೇತದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಅರ್ಪಿಸಲಿದ್ದಾರೆ.
ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮವು ಜುಲೈ 29, ಸೋಮವಾರದಂದು ಬೆಳಗ್ಗೆ 11 ಗಂಟೆಗೆ ಕೃಷ್ಣರಾಜಸಾಗರದ ಶ್ರೀ ಕಾವೇರಿ ಮಾತೆ ಪ್ರತಿಮೆಯ ಬಳಿ ನಡೆಯಲಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮವು ಜುಲೈ 29, ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಬೀಚನಹಳ್ಳಿಯ ಕಬಿನಿ ಜಲಾಶಯದ ಬಳಿ ನಡೆಯಲಿದೆ.