ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ಕುರಿತು ತನಿಖೆ ಚುರುಕುಗೊಳಿಸಿರುವ ಸಿಐಡಿ ಹಾಗೂ ಎಸ್ಐಟಿ ಅಧಿಕಾರಿಗಳು ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿದೆ.
ಆರೋಪಿಯ ಹೈದರಾಬಾದ್ ಮನೆಯಲ್ಲಿ ಬರೋಬ್ಬರಿ 10 ಕೆ.ಜಿ.ಚಿನ್ನದ ಬಿಸ್ಕೆಟ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಐಟಿಯ ಉನ್ನತ ಮೂಲಗಳು ಮಾಹಿತಿ ನೀಡಿವೆ. ಆರೋಪಿ ಸತ್ಯನಾರಾಯಣ ವರ್ಮಾ, ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಮಾಹಿತಿಯಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಈಗಾಗಲೇ ವಾಲ್ಮೀಕಿ ನಿಗಮದಲ್ಲಿ ನಡೆದಿರುವಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡ ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಈ ಕುರಿತು ಇತ್ತೀಚೆಗೆ ಸದನದಲ್ಲೂ ಕೂಡ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು.