ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಹ ಆಗಿದೆ. ಇದೀಗ ಸ್ವಾವಲಂಬಿ ಜೀವನ ನಡೆಸಲು ರ್ಯಾಪಿಡೊ ಬೈಕ್ ಟ್ಯಾಕ್ಸಿ ಚಲಾಯಿಸಿಕೊಂಡು ಜೀವನ ನಡೆಸುತ್ತಿದ್ದ ಮಹಿಳೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಹೌದು ರ್ಯಾಪಿಡೊ ಬೈಕ್ ಟ್ಯಾಕ್ಸಿ ಚಲಾಯಿಸುತ್ತಿದ್ದ ಮಹಿಳೆಗೆ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದ ಯುವಕನಿಂದ ಅಸಭ್ಯ ವರ್ತನೆ ಆರೋಪ ಕೇಳಿಬಂದಿದೆ. 35 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಜೈಪುರ ಮೂಲದ ಮಹೇಶ್ (27) ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಲಹಳ್ಳಿಯ ಹೆಚ್ಎಂಟಿಯಿಂದ ದಾಸರಹಳ್ಳಿಗೆ ಬರುವ ಮಾರ್ಗ ಮಧ್ಯದಲ್ಲಿ ಯುವಕನಿಂದ ಅಸಭ್ಯ ವರ್ತನೆ ಮಾಡಿದ್ದಾರೆ ಮಹಿಳೆ ಆರೋಪಿಸಿದ್ದಾರೆ. ಘಟನೆ ಬಳಿಕ ಬೈಕ್ ನಿಲ್ಲಿಸಿ ಹೊಯ್ಸಳ ಪೊಲೀಸ್ರಿಗೆ ಮಹಿಳೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದು ಮಹೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.