ಹುಬ್ಬಳ್ಳಿ : ಬಡವರಿಗೆ ತಲುಪಬೇಕಾದ ಅನ್ನಭಾಗ್ಯ ಯೋಜನೆಯ ಅಕ್ಕಿಯೂ ಇದೀಗ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು ಇದೀಗ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ಅಕ್ಕಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಹಳೆ ಹುಬ್ಬಳ್ಳಿಯ ಇಸ್ಲಾಂ ಗಳ್ಳಿಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಅಧಿಕಾರಿಗಳಿಂದ ರೇಡ್ ಮಾಡಲಾಗಿದೆ. ಕರ್ನಾಟಕ ತೆಲಂಗಾಣದಿಂದ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಆರೋಪಿ ಕಲಂದರ್ ಮಾರಾಟ ಮಾಡುತ್ತಿದ್ದ. ಅಲ್ಮೆರಾ ತಯಾರಿಕಾ ಅಂಗಡಿಯಲ್ಲಿ ಅಕ್ಕಿ ಸಂಗ್ರಹಿಸಿಟ್ಟಿದ್ದ 36 ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಹಳೆ ಹುಬ್ಬಳ್ಳಿ ಪೋಲಿಸ್ಟ್ ಹಣೆಯಲ್ಲಿ ಪ್ರಕರಣ ದಾಖಲಾಗಿದೆ.