ರಾಮನಗರ : ಬಿಜೆಪಿಯ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರಿಗೆ ಪಿತೃ ವಿಯೋಗವಾಗಿದ್ದು,ಇಂದು ಅವರ ತಂದೆ ಪುಟ್ಟಮಾದೇಗೌಡ(89) ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಪುಟ್ಟ ಮಾದೇಗೌಡರು ಅನಾರೋಗ್ಯ ಹಾಗೂ ಅಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರಿಗೆ 89 ವರ್ಷ ವಯಸ್ಸು ಕೂಡ ಆಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳಿದಿದ್ದಾರೆ. ನಾಳೆ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಪುಟ್ಟ ಮಾದೇಗೌಡರು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.