ಬೆಂಗಳೂರು : ನಗರದಲ್ಲಿ ಇಂದು ಬಿಜೆಪಿ-ಜೆಡಿಎಸ್ ನಾಯಕರ ಸಭೆಯ ವೇಳೆಯಲ್ಲಿ ಸುದ್ದಿಗೋಷ್ಠಿಯಲ್ಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಿಂದ ರಕ್ತಸ್ತ್ರಾವ ಆಗಿದೆ. ತಕ್ಷಣ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು, ಈ ವೇಳೆ ಆಸ್ಪತ್ರೆಯ ವೈದ್ಯರು, ಸ್ಟ್ರೋಕ್ ಆಗಿದ್ದರಿಂದ ರಕ್ತ ಹೆಪ್ಪು ಕಟ್ಟದಂತೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು ಹಾಗಾಗಿ ರಕ್ತಸ್ರಾವವಾಗಿದೆ ಎಂದು ಮಾಹಿತಿ ನೀಡಿದರು.
ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿದ ನಂತರ ವೈದ್ಯರು ಅವರನ್ನು ತಕ್ಷಣ ಚಿಕಿತ್ಸೆಗೆ ಒಳಪಡಿಸಿದರು. ಈ ವೇಳೆ ಸುದ್ದಿಗಾರರು ಮಾತನಾಡಿದ ವೈದ್ಯರು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಂಪೂರ್ಣ ಪರೀಕ್ಷೆಗೆ ಒಳಪಡಿಸಿದ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದರು.
ಹಿಂದೆ ಎಚ್ಡಿ ಕುಮಾರಸ್ವಾಮಿಗೆ ಮೈಂಡ್ ಸ್ಟ್ರೋಕ್, ಹಾರ್ಟ್ ಸರ್ಜರಿ ಹಿನ್ನೆಲೆಯಲ್ಲಿ ರಕ್ತ ಹೆಪ್ಪುಗಟ್ಟದಂತೆ ಮಾಡುವ ಚಿಕಿತ್ಸೆ ಪಡೆದಿರಬಹುದು. ಅಥವಾ ಔಷಧಿಗೆ ಒಳಪಟ್ಟಿರುವ ಸಾಧ್ಯತೆ ಇದೆ. ಹೀಗಾಗಿ ಎಚ್ ಡಿ ಕುಮಾರಸ್ವಾಮಿಗೆ ಮೂಗಿನಿಂದ ರಕ್ತಸ್ತ್ರಾವ ಆಗಿದೆ ಎಂದು ಜಯನಗರದ ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದರು.