ಬೆಂಗಳೂರು : ಬಿಬಿಎಂಪಿ ಕಸದ ಲಾರಿಗೆ ಮತ್ತೆ ಇಬ್ಬರು ಬಲಿಯಾಗಿದ್ದು, ಲಾರಿ ಡಿಕ್ಕಿಯಾದ ರಭಸಕ್ಕೆ ಕೆಳಗೆ ಬಿದ್ದ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಮೆಜೆಸ್ಟಿಕ್ ನ ಕೆ.ಆರ್. ಸರ್ಕಲ್ ಮಾರ್ಗವಾಗಿ ಬರುತ್ತಿದ್ದ ಬೈಕ್ ಸವಾರರ ಮೇಲೆ ಕೆ.ಆರ್. ಸರ್ಕಲ್ ಕಡೆಗೆ ವೇಗವಾಗಿ ಬರುತ್ತಿದ್ದ ಬಿಬಿಎಂಪಿ ಕಸದ ಲಾರಿ ಹರಿದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಮೃತ ಬೈಕ್ ಸವಾರರನ್ನು ಪ್ರಶಾಂತ್, ಶಿಲ್ಪ ಎಂದು ಗುರುತಿಸಲಾಗಿದ್ದು, ಬಿಬಿಎಂಪಿ ಲಾರಿ ಹರಿದ ತಕ್ಷಣ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ ಮಾರ್ಗಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ.ಹಲಸೂರು ಗೇಟ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.