ಮೈಸೂರು : ಬಿಜೆಪಿಯವರು ಬ್ಲ್ಯಾಕ್ ಮೇಲ್, ಸುಳ್ಳು ಹೇಳುವುದರಲ್ಲಿ ನಿಸ್ಸಿಮರು ಎಂದು ಬಿಜೆಪಿ ಪಾದಯಾತ್ರೆ ಕುರಿತು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಒಂದಾದ್ರೂ ಪ್ರಕರಣವನ್ನು ನ್ಯಾಯಾಂಗ ತನಿಖೆ ಮಾಡಿಸಿದ್ರಾ? ಬಿಜೆಪಿ ಬ್ಲ್ಯಾಕ್ ಮೇಲ್ ಮಾಡುವುದರಲ್ಲಿ ನಿಸ್ಸಿಮರು, ಕುಮಾರಸ್ವಾಮಿ ಅವರೂ ಮುಡಾದಲ್ಲಿ ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೂ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ, ಪಕ್ಷದ ಬಗ್ಗೆ ಚರ್ಚಿಸಲು ವರಿಷ್ಠರು ಸಭೆ ಕರೆದಿದ್ದಾರೆ. ನಾನು ಡಿಸಿಎಂ ಡಿ.ಕೆ. ಶಿವಕುಮಾರ್ ನಾಳೆ ದೆಹಲಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.