ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಆಗಸ್ಟ್.1ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು, ದಿನಾಂಕ 01-08-2024ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಅಂತ ತಿಳಿಸಿದ್ದಾರೆ.
ಆಗಸ್ಟ್.1ರಂದು ಸಚಿವ ಸಂಪುಟದ 15ನೇ ಸಭೆಯು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ಆ.1ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ.
ಕಾವೇರಿ ತಾಯಿ 10 ವರ್ಷ ಬಾಗಿನ ಅರ್ಪಿಸುವ ಅವಕಾಶವನ್ನು ‘ಕಾಂಗ್ರೆಸ್’ಗೆ ನೀಡುತ್ತಾಳೆ: ಡಿಕೆ ಶಿವಕುಮಾರ್