ಬೆಂಗಳೂರು : ರಾಜ್ಯದ ರಾಜಕೀಯ ಬೆಳವಣಿಗೆಗೆ ಕುರಿತಂತೆ ಹಾಗೂ ಇತರೆ ವಿಷಯಗಗಳ ಕುರಿತು ಚರ್ಚಿಸಲು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಹೌದು ನಾಳೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಲಿದ್ದಾರೆ.
ಇನ್ನೂ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ. ಮುಡಾ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ಮನದಟ್ಟು ಮಾಡಲಿದ್ದಾರೆ.ಬಳಿಕ ನಾಳೆ ರಾತ್ರಿಯೆ ಸಿದ್ದರಾಮಯ್ಯ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.