ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ಭ್ರಷ್ಟಾಚಾರ ಆರೋಪ ಮಾಡಲಾಗಿತ್ತು. ಇದನ್ನು ವಿರೋಧಿಸಿ, ಖಂಡಿಸಿ ಬಿಜೆಪಿ ನಾಯಕರಿಂದ ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರ ಮೇಲೆ ಸುಳ್ಳು ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಖಂಡಿಸಿ ಆರೋಪವನ್ನು ವಾಪಸ್ ಪಡೆಯಬೇಕು, ಸಿಬಿಐ ತನಿಖೆಗೆ ಆದೇಶಿಸಬೇಕೆಂದು ವಿಧಾನಸೌಧದ ಗಾಂಧಿಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರು ಹಾಗೂ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿ ನೈತಿಕವಾಗಿ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಪರಿಷತ್ ಸದಸ್ಯ ಎನ್ ರವಿಕುಮಾರ್, ಎಸ್ ಸುರೇಶ್ ಕುಮಾರ್ ಸೇರಿದಂತೆ ಇತರರು ಭಾಗಿಯಾಗಿದ್ದರು.