ಬೆಂಗಳೂರು: ನಾನು ಎಷ್ಟು ದಿನ ಸಚಿವನಾಗಿರುತ್ತೇನೋ ಗೊತ್ತಿಲ್ಲ. ನಾನು ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ ಎಂಬುದಾಗಿ ಅಳಲು ತೋಡಿಕೊಳ್ಳುತ್ತಲೇ, ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಸಂಪುಟ ಸರ್ಜರಿಯ ಸುಳಿವನ್ನು ನೀಡಿದ್ದಾರೆ.
ಇಂದು ನಗರದಲ್ಲಿ ನಡೆಯುತ್ತಿರುವಂತ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಾನು ಎಷ್ಟು ದಿನ ಸಚಿವನಾಗಿ ಇರುತ್ತೇನೋ ಗೊತ್ತಿಲ್ಲ. ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಯಾಕೆಂದ್ರೆ ದೇವರು ಹಣೆ ಬರಹ ಬರೆದಿರುತ್ತಾನಲ್ಲ ಎಂದರು.
ಈಗ ನನ್ನನ್ನು ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ರಾಜ್ಯದಲ್ಲಿ ಮುಂದಿನ 4 ವರ್ಷ ನಮ್ಮದೇ ಸರ್ಕಾರವೇ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಕಲ್ಯಾಣ ಸಚಿವನಾಗಿ ಇರುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಭ್ರಷ್ಟಾಚಾರ ಆರೋಪ: ಬಿಜೆಪಿ ನಾಯಕರಿಂದ ಪ್ರತಿಭಟನೆ