ಬೆಂಗಳೂರು : ಮುಡಾದಲ್ಲಿ ನಡೆದಿರುವಂತಹ ಅಕ್ರಮವನ್ನು ಖಂಡಿಸಿ ಆಗಸ್ಟ್ 3 ರಂದು ಬಿಜೆಪಿ ಹಾಗೂ ಜೆಡಿಎಸ್ ಯಿಂದ ಪಾದಯಾತ್ರೆ ಆರಂಭವಾಗಲಿದೆ. ಈ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಸರ್ಕಾರದಿಂದ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪಾದಯಾತ್ರೆ ಮಾಡುವುದಾದರೆ ಮಾಡಲಿ. ಆದರೆ ಅವರ ಪಾದಯಾತ್ರೆಗೆ ಪೊಲೀಸ್ ಇಲಾಖೆಯಿಂದ ಅಧಿಕೃತವಾಗಿ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಅಗಸ್ಟ್ 3 ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಬಿಜೆಪಿ ಹಾಗೂ ಜೆಡಿಎಸ್ ನಿರ್ಧರಿಸಿವೆ. ಆಗಸ್ಟ್ 3 ರಂದು ಬೆಂಗಳೂರಿನ ಕೆಂಗೇರಿಯಿಂದ ಪಾದಯಾತ್ರೆಗೆ ಚಾಲನೆ ನೀಡುತ್ತಿದ್ದು, ಆಗಸ್ಟ್ 10 ರಂದು ಬಿಜೆಪಿ ಜೆಡಿಎಸ್ ಪಾದಯಾತ್ರೆ ಮೈಸೂರು ತಲುಪುತ್ತದೆ. ಅಂದೇ ಮೈಸೂರಿನಲ್ಲಿ ಸಮಾರೋಪ ಸಮಾರಂಭಕ್ಕೆ ನಿರ್ಧಾರ ಮಾಡಿದ್ದು ಸಮಾರೋಪಕ್ಕೆ ದೆಹಲಿ ನಾಯಕರನ್ನು ಕರೆತರಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.