ಬೆಂಗಳೂರು : ಕಾವೇರಿ ನದಿಗೆ ಅಸ್ಥಿ ವಿಸರ್ಜನೆ ಸೇರಿ ಇತರ ಮಾಲಿನ್ಯಕಾರಕ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಈ ಸಂಬಂಧ ಮಾರ್ಗಸೂಚಿಗಳನ್ನು ರಚನೆ ಮಾಡುವಂತೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತು ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರು ನಿವಾಸಿ ವಕೀಲ ಕುಶಾಲ್ ಕುಮಾರ್ ಕೌಶಿಕ್ ಸೇರಿ ಆರು ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾ. ಕೆ. ವಿ ಅರವಿಂದ ಅವರಿದ್ದ ವಿಭಾಗೀಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಉಪ ವಿಭಾಗಾಧಿಕಾರಿ, ಶ್ರೀರಂಗಪಟ್ಟಣ ತಹಶೀಲ್ದಾರ್, ಶ್ರೀರಂಗಪಟ್ಟಣ ನಗರಸಭೆಗೆ ನೋಟಿಸ್ ಜಾರಿ ಮಾಡಿ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ವಿಚಾರಣೆಯ ವೇಳೆ ಅರ್ಜಿದಾರರು ಖಾಸಗಿ ಸ್ಥಳಗಳಲ್ಲೂ ಅಸ್ತಿ ವಿಸರ್ಜನೆ ನಡೆಯುತ್ತಿದೆ. ಕಾವೇರಿ ನದಿಯ ನೀರು ಕುಡಿಯಲು ಯೋಗ್ಯವಾಗಿಲ್ಲವೆಂದು ವರದಿ ಇದೆ. ನದಿಯ ದಡಗಳಲ್ಲಿ ನಿಯಂತ್ರಣವಿಲ್ಲದೆ ಅಸ್ತಿ ವಿಸರ್ಜನೆ ನಡೆಯುತ್ತಿದೆ ಹೀಗಾಗಿ ಆಸ್ತಿ ವಿಸರ್ಜನೆಗೆ ನಿಯಮ ರೂಪಿಸುವಂತೆ ಮನವಿ ಮಾಡಿದರು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧಿಶರು ಈ ಕುರಿತಂತೆ ರಾಜಕಾರಕ್ಕೆ ನೋಟಿಸ್ ನೀಡಿ ಆದೇಶ ಹೊರಡಿಸಿದೆ.
ಅಸ್ಥಿ ವಿಸರ್ಜನೆ ಕ್ರಿಯೆಗೆ ನಮ್ಮ ವಿರೋಧವಿಲ್ಲ. ಆದರೆ, ಅದಕ್ಕೊಂದು ನಿಗದಿತ ಸ್ಥಳ ನಿಗದಿ ಮಾಡಬೇಕು. ನಿರ್ದಿಷ್ಟ ಮಾರ್ಗಸೂಚಿಗಳು ಇರಬೇಕು. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತಾಗಬೇಕು ಎಂಬುದಷ್ಟೇ ನಮ್ಮ ಕಾಳಜಿ. ಏಕೆಂದರೆ, ಕಾವೇರಿ ನದಿ ತೀರದಲ್ಲಿ ಮಾಲಿನ್ಯ ವಿಪರೀತವಾಗಿ ಹೆಚ್ಚಳವಾಗಿದೆ ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ವರದಿಯಲ್ಲಿ ಕಾವೇರಿ ನದಿ ತೀರದಲ್ಲಿ ಮಾಲಿನ್ಯ ಹೆಚ್ಚಾಗುವುದಕ್ಕೆ ಕಾರಣಗಳನ್ನು ಉಲ್ಲೇಖಿಸಲಾಗಿದೆ.