ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ (PIL) ಅರ್ಜಿ ದಾಖಲಾಗಿದೆ.
ಹೌದು ಲೋಕಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು.
ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ ಮಾಸ್ ರೇಪ್ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.ಇದರ ವಿಡಿಯೋ ಹಿಡಿದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮು ಅವರು ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.