ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಆವರಿಗೆ ಜೈಲಿನ ಊಟ ಸರಿ ಹೊಂದುತ್ತಿಲ್ಲ ಎಂಬ ಕಾರಣದಿಂದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾ ಗೊಳಿಸಿತ್ತು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಹೌದು ನಟ ದರ್ಶನ್ ಅವರಿಗೆ ಜೈಲಿನ ಊಟದಿಂದ ಆರೋಗ್ಯದಲ್ಲಿ ಇರುತೇರು ಉಂಟಾಗುತ್ತಿದ್ದು ಅಲ್ಲದೆ ಅತಿಸಾರ ಭೇದಿ ಆಗುತ್ತಿದೆ ಎಂದು ಇತ್ತೀಚಿಗೆ ಬೆಂಗಳೂರಿನ ಮ್ಯರಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಾದ ಪ್ರತಿವಾದಗಳನ್ನು ಆಲಿಸಿ ದರ್ಶನ್ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತ್ತು.
ಮನೆಯಿಂದ ಊಟ ಬಟ್ಟೆ ಹಾಸಿಗೆ ಪಡೆಯಲು ಅನುಮತಿ ನಿರಾಕರಿಸಿತ್ತು. ಇದೀಗ ಮ್ಯಾಜಿಸ್ಟ್ರೇಟ್ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಪರ ವಕೀಲ ರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.