ಕೇರಳ: ಇಲ್ಲಿನ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಮಾರು ನೂರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಜಿಲ್ಲೆಯ ಮತ್ತು ಸುತ್ತಮುತ್ತಲಿನ ಲಭ್ಯವಿರುವ ಎಲ್ಲಾ ಆರೋಗ್ಯ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆಗೆ ಸೇರಲು ನಿರ್ದೇಶನ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ನೆರವು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ತಿಳಿಸಿದ್ದಾರೆ.
ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ.#Keralalandslide
— Siddaramaiah (@siddaramaiah) July 30, 2024
ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ 73 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಮಾರು ನೂರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಸಂಭವಿಸಿದ ಭೂಕುಸಿತವು ಈ ಪ್ರದೇಶವನ್ನು ಕಡಿತಗೊಳಿಸಿದೆ. ಚುರಲ್ಪಾರಾ, ವೇಲಾರಿಮಾಲಾ, ಮುಂಡಕಯಿಲ್ ಮತ್ತು ಪೋತುಕಾಲು ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ.
ವಯನಾಡಿನಲ್ಲಿ ಭೀಕರ ಭೂ ಕುಸಿತ: 5 ಕೋಟಿ ಪರಿಹಾರದ ನೆರವು ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್
ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’
BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು