ವಸತಿ ರಹಿತ ತೃತೀಯ ಲಿಂಗಿ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಆಸಕ್ತ ಅರ್ಹ ತೃತೀಯ ಲಿಂಗಿ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆ.08 ಕೊನೆಯ ದಿನವಾಗಿರುತ್ತದೆ.
ದಾಖಲೆಗಳು:
ಅರ್ಜಿದಾರರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ನಿವೇಶನದ ಖಾತೆಯ ನಕಲು ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿಯೊಂದಿಗೆ ಪಾಸ್ಪೋರ್ಟ್ ಅಳತೆಯ ಫೋಟೋ ಒದಗಿಸಬೇಕು.
ತೃತೀಯ ಲಿಂಗಿ ಅರ್ಜಿದಾರರು ಮಾತ್ರ ಅರ್ಹರಾಗಿದ್ದು, ಪುರಸಭೆ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿದ ಖಾಲಿ ನಿವೇಶನದ ಪ್ರಸಕ್ತ ಸಾಲಿನ ನಮೂನೆ-3ರ ನಕಲು ಪ್ರತಿ, ಮುಟೇಶನ್ ಪ್ರತಿ, ಕ್ರಯ ಪತ್ರ, ದಾನ ಪತ್ರದ ನಕಲು, ಪ್ರಸಕ್ತ ಸಾಲಿಗೆ ಇರುವಂತೆ 15 ವರ್ಷದ ಇಸಿ ದಾಖಲೆಗಳ ನಕಲು ಪ್ರತಿಗಳೊಂದಿಗೆ ಅರ್ಜಿ ನಮೂನೆ ನೀಡಬೇಕು. ಒಟ್ಟು 89 ಗುರಿಯನ್ನು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕುರೇಕುಪ್ಪ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.