ಬೆಂಗಳೂರು : ರಾಜ್ಯ ಕಾರ್ಮಿಕ ಮಂಡಳಿಯು ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಫಲಾನುಭವಿಯು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
* ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
* ನೋಂದಣಿದಾರರು ಮತ್ತು ಅವರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್
* ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
* ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ
* ವಿದ್ಯಾರ್ಥಿಯ SATS ಐಡಿ ಅಥವಾ ಸೂಡೆಂಟ್ ಐಡಿ
* ವ್ಯಾಸಂಗ ಪ್ರಮಾಣ ಪತ್ರ
* ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಕಾರ್ಮಿಕ ಸಹಾಯವಾಣಿ 155214