ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ.
ಆಗಸ್ಟ್ 12 ರಿಂದ ಸೆಪ್ಟೆಂಬರ್ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿದೆ.
ತಲಾ 300 ಅಂಕಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಮತ್ತು ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳ ಶೇಕಡಾವಾರು ಆಧಾರದಲ್ಲಿ ಮತ್ತು ಮೀಸಲಾತಿ ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಎಸ್ಸಿ ತಿಳಿಸಿದೆ.
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 12 ರಿಂದ ಸೆಪ್ಟೆಂಬರ್ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ₹300,… pic.twitter.com/jzbPLs3wyQ
— DIPR Karnataka (@KarnatakaVarthe) July 30, 2024
ರಾಜ್ಯದಿಂದ 1,403 ಕೋಟಿ ರೂ ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಕೆ.ಜೆ ಜಾರ್ಜ್
ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’