ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಯಾದಗಿರಿ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಹೆಚ್ಚುವರಿ ನಿಲುಗಡೆಗೆ ಅವಕಾಶ ನೀಡಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.
ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಈ ರೈಲುಗಳ (22232/22231) ಆಗಮನ/ನಿರ್ಗಮನದ ವೇಳಾಪಟ್ಟಿ ಈ ಕೆಳಗಿನಂತಿವೆ:
1. ಆಗಸ್ಟ್ 3 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22232 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ರಾತ್ರಿ 9:44 ಗಂಟೆಗೆ ಆಗಮಿಸಿ, 9:45 ಕ್ಕೆ ಹೊರಡಲಿದೆ.
2. ಆಗಸ್ಟ್ 4 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 5:54 ಕ್ಕೆ ಬಂದು, 5:55 ಕ್ಕೆ ಹೊರಡಲಿದೆ.
BREAKING: ಭಾರೀ ಮಳೆ ಹಿನ್ನಲೆ: ನಾಳೆ ಸಾಗರ, ಹೊಸನಗರ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ
ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’