ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಸಂಭವಿಸಿದಂತ ಭೂಕುಸಿತ ದುರಂತದಲ್ಲಿ ಕರ್ನಾಟಕದ ಇಬ್ಬರು ಕನ್ನಡಿಗರು ಬಲಿಯಾಗಿದ್ದಾರೆ. ಅಲ್ಲದೇ ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ತಿಳಿದು ಬಂದಿದೆ.
ಈ ಕುರಿತಂತೆ ಚಾಮರಾಜನಗರ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ. ಇವರು ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೋರಲ್ಲಾದಲ್ಲಿ ವಾಸವಾಗಿದ್ದರು. ನಾಪತ್ತೆಯಾಗಿರುವವರ ಪತ್ತೆಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ ಅಂತ ತಿಳಿಸಿದೆ.
ಇನ್ನೂ ಕೇರಳದ ಮೆಪ್ಪಾಡಿಯಲ್ಲಿ ವಾಸವಿದ್ದಂತ ಚಾಮರಾಜನಗರದ ಪುಟ್ಟಸಿದ್ಧಿ(62) ಹಾಗೂ ರಾಣಿ ಎಂಬುವರ ತಾಯಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿಸಿದೆ.
ಕೇರಳದ ವಯಾನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರ್ಘಟನೆಯಲ್ಲಿ ಈವರೆಗೆ 128ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ.
ವಯನಾಡು ಭೂಕುಸಿತ: ಕನ್ನಡಿಗರ ರಕ್ಷಣೆಗೆ ಧಾವಿಸಿ ರಾಜ್ಯ ಸರ್ಕಾರ, ಸಹಾಯವಾಣಿ ಸಂಖ್ಯೆ ರಿಲೀಸ್ | Wayanad Landslide
BREAKING: ಕ್ರೌಡ್ ಸ್ಟ್ರೈಕ್ ನಂತ್ರ ‘ಮೈಕ್ರೋಸಾಫ್ಟ್ 365’ ಸೇವೆ ಸ್ಥಗಿತ: ಬಳಕೆದಾರರು ಪರದಾಟ | Microsoft 365