ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಅಬ್ಬರದ ನಡುವೆಯೇ ಝೀಕಾ ವೈರಸ್ ಆತಂಕ ಶುರುವಾಗಿದ್ದು, ರಾಜ್ಯದಲ್ಲಿ ಮೂವರಿಗೆ ಝೀಕಾ ವೈರಸ್ ಸೋಂಕು ದೃಢಪಟ್ಟಿದೆ.
ಕರ್ನಾಟಕದಲ್ಲಿ 3 ಸೇರಿದಂತೆ ಭಾರತದಲ್ಲಿ ಈ ವರ್ಷ ಒಟ್ಟು 13 ಝೀಕಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ 10, ಕರ್ನಾಟಕದಲ್ಲಿ 3 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಝೀಕಾ ವೈರಸ್ ನಿರ್ವಹಣೆಗೆ ಯೋಜನೆ ರೂಪಿಸಲಾಗಿದ್ದು, ಮಾರ್ಗಸೂಚಿ ಅನುಷ್ಠಾನಕ್ಕೆ ರಾಜ್ಯಗಳಿಗೆ ಸೂನಚೆ ನೀಡಲಾಗಿದೆ ಎಂದು ಹೇಳಿದ್ದಾರೆ.