ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಅವರ ಅಂಗರಕ್ಷಕರೊಬ್ಬರು ಟೆಹ್ರಾನ್ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಸಾವನ್ನಪ್ಪಿದ್ದಾರೆ ಎಂದು ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಹೇಳಿಕೆಯಲ್ಲಿ ದೃಢಪಡಿಸಿದೆ.
ಸರ್ವೋಚ್ಚ ನಾಯಕನನ್ನು ಭೇಟಿಯಾಗಲು ಮತ್ತು ಹೊಸ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ಹನಿಯೆಹ್ ಟೆಹ್ರಾನ್ ನಲ್ಲಿದ್ದರು. ಐಆರ್ಜಿಸಿಯ ಸಾರ್ವಜನಿಕ ಸಂಪರ್ಕ ಇಲಾಖೆ ಬುಧವಾರ ಮುಂಜಾನೆ ದಾಳಿ ನಡೆದಿದ್ದು, ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಘೋಷಿಸಿದೆ.