ಬೆಂಗಳೂರು : ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪ್ರಕರಣ ಸಂಬಂಧ ಎಸಿಪಿ ಚಂದನ್ ಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ.
ಪುನೀತ್ ಕೆರೆಹಳ್ಳಿ ಬಿಡುಗಡೆ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಪ್ರತಾಪ್ ಸಿಂಹ, ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ಎಸಿಪಿ ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಹೇಳಿದ್ದರು.ಈ ಹಿನ್ನೆಲೆ ಪ್ರತಾಪ್ ಸಿಂಹ ವಿರುದ್ಧ ಎಸಿಪಿ ಚಂದನ್ ಕುಮಾರ್ ದೂರು ದಾಖಲಿಸಿದ್ದಾರೆ.
ಯಾವುದೇ ದಾಖಲೆ ಇಲ್ಲದಿದ್ರೂ ರಾಜಕೀಯ ಉದ್ದೇಶದಿಂದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು. pic.twitter.com/ThZwMlW8oN
— Prathap Simha (@mepratap) July 30, 2024