Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ದಲಿತ ವಿರೋಧಿ ರಾಜ್ಯ ಸರ್ಕಾರ’ದ ಆರೋಪಕ್ಕೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah
KARNATAKA

BIG NEWS: ‘ದಲಿತ ವಿರೋಧಿ ರಾಜ್ಯ ಸರ್ಕಾರ’ದ ಆರೋಪಕ್ಕೆ ಈ ಸ್ಪಷ್ಟನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’ | CM Siddaramaiah

By kannadanewsnow0931/07/2024 4:51 PM

ಬೆಂಗಳೂರು: ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು, ದಲಿತ ಪರ ರಾಜ್ಯ ಸರ್ಕಾರವನ್ನು ಅಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಲಿತ ವಿರೋಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು,  ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ? ಎಂದು ಪ್ರಶ್ನಿಸಿದ್ದಾರೆ.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 25ರಷ್ಟು ಅನುದಾನವನ್ನು ಮೀಸಲಿಡಿ, ಆ ಮೇಲೆ ನಮ್ಮನ್ನು ಪ್ರಶ್ನೆ ಮಾಡಲು ಬನ್ನಿ. ಅಲ್ಲಿಯ ವರೆಗೆ ಮೌನವಾಗಿರುವುದು ನಿಮಗೆ ಕ್ಷೇಮ ಎಂದಿದ್ದಾರೆ.

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3,71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ ಎಂದು ತಿಳಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರೇ, ನಿಮ್ಮ ಬಜೆಟ್ ನೋಡಿದರೆ ನೀವು ಯಾರಿಗೆ ಹಲ್ವಾ ಹಂಚಿದ್ದೀರಿ ಎನ್ನುವುದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತದೆ. ಇದನ್ನೆ ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಹೇಳಿದ್ದು. ಶೇಕಡಾ 75ರಷ್ಟು ಮಂದಿಯನ್ನು ಉಪವಾಸ ಬೀಳಿಸಿ ಶೇಕಡಾ 25 ಮಂದಿಗೆ ಹಲ್ವಾ ತಿನ್ನಿಸುತ್ತಿದ್ದೀರಿ. ಈ ನಿಮ್ಮ ದಲಿತ ವಿರೋಧಿ ನೀತಿ ಬಯಲಾಗುವ ಭಯದಿಂದಲೇ ನೀವು ಜಾತಿ ಗಣತಿಯನ್ನು ವಿರೋಧಿಸುತ್ತಿರುವುದು ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷ, ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಚೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು ಎಂದು ಹೇಳಿದ್ದಾರೆ.

ರಾಜ್ಯದ ರೀತಿಯಲ್ಲಿಯೇ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇನೆ. ಈ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಿರಸ್ಕರಿಸುತ್ತಾ ಬಂದಿದ್ದಾರೆ. ಇಂತಹವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕಣ್ಣೀರು ಹಾಕುತ್ತಿರುವುದು ಹಾಸ್ಯ ಪ್ರಸಂಗದಂತೆ ಕಾಣುತ್ತಿದೆ ಎಂದಿದ್ದಾರೆ.

ಎಸ್ ಸಿ ಎಸ್ ಪಿ/ಟಿಎಸ್ ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ ಎಂದು ಗುಡುಗಿದ್ದಾರೆ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್ ಸಿ ಮತ್ತು ಎಸ್ ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ, ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್ ಸಿ/ಎಸ್ ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ತಿಳಿಸಿದ್ದಾರೆ.

ಈಗ ಹೇಳಿ ನಿರ್ಮಲಾ ಸೀತಾರಾಮನ್ ಅವರೇ, ದಲಿತರು ಮೊದಲು ಪ್ರಶ್ನೆ ಮಾಡಬೇಕಾಗಿರುವುದು ಯಾರನ್ನು? ಎಸ್ ಸಿ ಎಸ್ ಪಿ-ಟಿ ಎಸ್ ಪಿ ಕಾಯ್ದೆಯೂ ಸೇರಿದಂತೆ ದಲಿತರ ಕಲ್ಯಾಣಕ್ಕಾಗಿ ಸಾಲುಸಾಲು ಯೋಜನೆಗಳನ್ನು ಜಾರಿಗೆ ತರುತ್ತಿರುವ ನಮ್ಮ ರಾಜ್ಯ ಸರ್ಕಾರವನ್ನೇ? ಬಜೆಟ್ ನಲ್ಲಿ ದಲಿತರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದ ಪಾಲನ್ನೂ ನೀಡದೆ ಅನ್ಯಾಯ ಎಸಗುತ್ತಿರುವ ಕೇಂದ್ರ ಸರ್ಕಾರವನ್ನೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

‘ಭ್ರೂಣ ಹತ್ಯೆ’ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ‘ಪ್ರಧಾನಿ ಮೋದಿ’ಗೆ ಮಹಿಳೆ ಪತ್ರ

‘ದೇವೇಗೌಡ’ರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ‘HDK’ ಗುಡುಗು

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM1 Min Read

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM1 Min Read
Recent News

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM
State News
KARNATAKA

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

By kannadanewsnow0907/06/2025 7:57 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ…

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.