ಬೆಂಗಳೂರು: ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಹೊರಗುಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ವೇಳೆಯಲ್ಲೇ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳದಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಈ ಸಭೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗುತ್ತಿಲ್ಲ. ಅವರು ಹೊರಗೆ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.
ನಾಳೆಯ ಸಚಿವ ಸಂಪುಟ ಜವಾಬ್ದಾರಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ನೀಡಿದ್ದು, ಅವರ ನೇತೃತ್ವದಲ್ಲಿಯೇ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
BREAKING : ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಪರಿಹಾರದ ಜೊತೆಗೆ ಹೊಸ ಮನೆ : ಸಚಿವ ಕೃಷ್ಣ ಭೈರೇಗೌಡ