ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಸಚಿವ ಸಂಪುಟ ಬದಲಾವಣೆಯ ಚರ್ಚೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಹೋದ್ಯೋಗಿಗಳಿಗಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ.
ದೆಹಲಿಯಿಂದ ವಾಪಾಸ್ ಆಗಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗಾಗಿ ಕಾವೇರಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ ಸದ್ಯ ಸಿಎಂ ನಡೆ ತೀವ್ರ ಕುತೂಹಲ ಮೂಡಿಸಿದೆ.
ಇನ್ನು ಆಗಸ್ಟ್ 4ರಂದು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕೆಲ ಸಚಿವರ ಬದಲಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಲಿದ್ದಾರೆ ಎನ್ನಲಾಗಿದೆ.