ಬೆಂಗಳೂರು : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಗಮದಿಂದ 2024-25ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/08/2024 (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು,
1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
2. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಹಿಂವಕ/155/ಬಿಸಿಎ/2020, ದಿನಾಂಕ:28/09/2020ರನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು.
3. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
4. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.
S ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.
6. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
7. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷಗಳು,
8. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು.
9. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.
10. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1,20,000/-ಗಳ ಮಿತಿಯೊಳಗಿರಬೇಕು.
11. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ% ಮೀಸಲಾತಿ ಇರಿಸಿದೆ.
ರಾಜ್ಯ ಸರ್ಕಾರದ/ನಿಗಮದ ಯೋಜನೆಗಳ ವಿವರ: –
ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು:-
(1) ಸ್ವಯಂ ಉದ್ಯೋಗ ನೇರಸಾಲ ಯೋಜನೆ
(2) ಆರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು)
(3) ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು
(4) ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ)
(5) ಸ್ವಾವಲಂಬಿ ಸಾರಥಿ ಯೋಜನೆ.
(6) ವಿದೇಶಿ ವ್ಯಾಸಂಗ ಯೋಜನೆ-ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8.00 ಲಕ್ಷಗಳ ಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು
ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳು)
ಬೆಂಗಳೂರು-ಒನ್/ಕರ್ನಾಟಕ-ಒನ್/ಆಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.
> ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848/7899899039ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಗಳಲ್ಲಿ ಪೂರ್ವಾಹ್ನ 10.00ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.
ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 31/08/2024 ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.