ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಜೈಲಿನಲ್ಲಿ ಇರುವಂತ ಅವರ ನ್ಯಾಯಾಂಗ ಬಂಧನವನ್ನು ಕೋರ್ಟ್ ಮತ್ತೆ ಆಗಸ್ಟ್.14ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ ಎನ್ನುವಂತೆ ಆಗಿದೆ.
ಇಂದು ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ವಿಚಾರಣೆ ನಡೆಸಿತು. ಬಳಿಕ ಆಗಸ್ಟ್.14ರವರೆಗೆ ಮತ್ತೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ.
ಒಟ್ಟಾರೆಯಾಗಿ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಬೆಂಗಳೂರಿನ 24ನೇ ACMM ನ್ಯಾಯಾಲಯ ಇದೀಗ ಆದೇಶ ಹೊರಡಿಸಿದೆ. ಈ ಮೂಲಕ ನಟ ದರ್ಶನ್ ಗೆ ಮತ್ತೆ ಜೈಲೇಗತಿ ಎನ್ನುವಂತೆ ಆಗಿದೆ.
ಅಂದಹಾಗೇ, ನನಗೆ ಜೈಲು ಊಟ ಸೇರುತ್ತಿಲ್ಲ ಇದರಿಂದ ವಾಂತಿ, ಭೇದಿ ಅತಿಸಾರ ಆಗುತ್ತಿದೆ ಎಂದು ನಟ ದರ್ಶನ ಅವರು ಇತ್ತೀಚಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನೆ ಊಟ ಬಟ್ಟೆ ಹಾಗೂ ಇತರೆ ವಸ್ತುಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅವರ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಆಗಸ್ಟ್ 20.ಕ್ಕೆ ಮುಂದೂಡಿತ್ತು. ಅದಕ್ಕೆ ಅವಕಾಶ ಸಿಗುತ್ತಾ ಇಲ್ಲ ಅನ್ನೋದನ್ನು ಕಾದು ನೋಡಬೇಕಿದೆ.
‘HSRP’ ನಂಬರ್ ಪ್ಲೇಟ್ ಬುಕಿಂಗ್ ವೇಳೆ ಇರಲಿ ಎಚ್ಚರ : ಸೈಬರ್ ವಂಚಕರಿಂದ 95 ಸಾವಿರ ರೂ. ಕಳೆದುಕೊಂಡ ವ್ಯಕ್ತಿ!
BIG NEWS: ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ