ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶೀಲ್ಲಾ ಸ್ಟ್ರೀಟ್ ನಲ್ಲಿ ಇಂದು ಈ ಘಟನೆ ನಡೆದಿದೆ. ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತ ಅಜಿತ್(27) ಎಂಬಾತನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಸಂಜೆ 4.15ಕ್ಕೆ ಮನೆಯಿಂದ ಊಟ ಮಾಡಿಕೊಂಡು ಹೊರಗೆ ಬಂದಿದ್ದಂತ ರೌಡಿ ಶೀಟರ್ ಅಜಿತ್ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ಮಾಡಿ, ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವುದಾಗಿ ಹೇಳಲಾಗುತ್ತಿದೆ.
ಈ ವಿಷಯ ತಿಳಿದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆಯ ಹಿಂದಿನ ಕಾರಣ ಏನು ಎಂಬುದು ತಿಳಿದು ಬರಬೇಕಿದೆ.
‘HSRP’ ನಂಬರ್ ಪ್ಲೇಟ್ ಬುಕಿಂಗ್ ವೇಳೆ ಇರಲಿ ಎಚ್ಚರ : ಸೈಬರ್ ವಂಚಕರಿಂದ 95 ಸಾವಿರ ರೂ. ಕಳೆದುಕೊಂಡ ವ್ಯಕ್ತಿ!
BREAKING : ನಟ ದರ್ಶನ್ ಗೆ ಜೈಲೇ ಗತಿ : ಆ.14ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ