ಬೆಂಗಳೂರು : ಮೈಸೂರು ಜಿಲ್ಲೆಯ ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ. ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ಇತ್ತೀಚೆಗೆ ಮುಂದೂಡಲಾಗಿತ್ತು.
ಎಸ್ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಎಸ್ಐಟಿ ಮತ್ತು ಅರ್ಜಿದಾರರ ಪರ ವಾದ ಆಲಿಸಿ ತೀರ್ಪು ಕಾಯ್ದಿರಿಸಿತು. ಈಗಾಗಲೇ ಕೆಆರ್ ನಗರ ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ರೇವಣ್ಣಗೆ ಜೈಲು ಶಿಕ್ಷೆಯಾಗಿತ್ತು. ಕಿಡ್ನ್ಯಾಪ್ ಸಂತ್ರಸ್ತೆಯ ದೂರಿನ ಮೇಲೆ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. 10 ದಿನ ಜೈಲು ಅನುಭವಿಸಿ ಹೊರ ಬಂದಿದ್ದಾರೆ.
ಪ್ರಕರಣದ ಹಿನ್ನೆಲೆ?
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಂತ್ರಸ್ತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಲ್ಲದೇ, ಅತ್ಯಾಚಾರವೆಸಗಿರುವ ಆರೋಪವಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆಯನ್ನು ಅಪಹರಣ ಮಾಡಲಾಗಿತ್ತು. ಆ ಮೂಲಕ ಸಂತ್ರಸ್ತೆ ಪ್ರಕರಣ ಸಂಬಂಧ ಯಾವುದೇ ಆರೋಪ ಹೊರಬಾರದಂತೆ ನಿಯಂತ್ರಣ ಮಾಡಲಾಗಿದೆ ಎಂದು ದೂರಲಾಗಿತ್ತು. ಈ ಸಂಬಂಧ ಸಂತ್ರಸ್ತೆಯ ಮಗ ದೂರು ದಾಖಲಿಸಿದ್ದರು.