ಕೇರಳ: ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 293ಕ್ಕೆ ಏರಿಕೆಯಾಗಿದೆ. ಅಲ್ಲದೇ 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತದಲ್ಲಿ ಮೂರು ಊರುಗಳೇ ನಾಪತ್ತೆಯಾಗಿವೆ. ಈ ಹಳ್ಳಿಗಳಲ್ಲಿನ 293 ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ. ಅಲ್ಲದೇ ಈವರೆಗೆ ಸಿಕ್ಕ ಮಾಹಿತಿಯಂತೆ 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ.
ಇದೇ ಸಂದರ್ಭದಲ್ಲಿ ಇಂದು ವಯನಾಡಿನ ಭೂ ಕುಸಿತ ಸ್ಥಳಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದಂತ ರಾಹುಲ್ ಗಾಂಧಿ ಅವರು, ನಮ್ಮ ತಂದೆಯನ್ನು ಕಳೆದುಕೊಂಡಾಗಲೂ ಇಷ್ಟು ದುಃಖವಾಗಿರಲಿಲ್ಲ. ಅಷ್ಟು ದುಃಖ ನನಗೆ ಆಗುತ್ತಿದೆ. ಇಲ್ಲಿನ ಚಿತ್ರಣವನ್ನು ಕಂಡು ನಾನು ಭಾವುಕನಾಗಿದ್ದೇನೆ ಎಂದರು.
‘HSRP’ ನಂಬರ್ ಪ್ಲೇಟ್ ಬುಕಿಂಗ್ ವೇಳೆ ಇರಲಿ ಎಚ್ಚರ : ಸೈಬರ್ ವಂಚಕರಿಂದ 95 ಸಾವಿರ ರೂ. ಕಳೆದುಕೊಂಡ ವ್ಯಕ್ತಿ!