ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಜನರು ಆಶೀರ್ವದಿಸಿ ಅಧಿಕಾರ ನೀಡಿದ್ದಾರೆ ಆದರೆ ಸರ್ಕಾರ ತೆಗೆಯಲು ಹುನ್ನಾರ ನಡೆಯುತ್ತಿದೆ. ಆದರೆ ಇದು ಯಾವ ಕಾರಣಕ್ಕು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಾನೂನು, ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಗೌರವಾನ್ವಿತ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ಇದೆ ಎಂದರು.
ಬಹುಮತದಿಂದ ಆಯ್ಕೆಯಾದ ಸಿಎಂಗೆ ತೊಂದರೆ ಕೊಡಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುತ್ತಿದೆ. ರಾಜ್ಯಪಾಲರ ಪತ್ರಕ್ಕೆ ಸಿಎಸ್ ಉತ್ತರಿಸಿದ್ದಾರೆ. ಸಿದ್ಧರಾಮಯ್ಯ ಕೂಡ ಗೌರವ ಕೊಟ್ಟಿದ್ದಾರೆ ಎಂದರು.
ಪ್ರಜಾಪ್ರಭುತ್ವಕ್ಕೆ ಮಾರಕ ಸ್ಥಿತಿ ಬಂದು ಒದಗಿದೆ. ಸಂವಿಧಾನದ ಕಗ್ಗೊಲೆ ಆಗಿದೆ. ರಾಜ್ಯಪಾಲರು ಸಿಎಸ್ಗೆ ಪತ್ರ ಬರೆಯುತ್ತಾರೆ.ಶಾಸಕಾಂಗ ಸಭೆ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಮಾಡಿದೆ. ಕಾನೂನಿಗೆ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ರಾಜ್ಯ ಪಾಲರನ್ನು ಕೇಂದ್ರ ಸರ್ಕಾರ ಬಳಸಿಕೊಂಡಿದೆ. ಟಿಜೆ ಅಬ್ರಹಾಮ ಹಿನ್ನೆಲೆ ಎಲ್ಲರಿಗೂ ಗೊತ್ತಿದೆ. ಸುಪ್ರೀಂ ಕೋರ್ಟ್ ಟಿಜೆ ಅಬ್ರಹಾಮ್ ಹೇಗೆ ಹಾಕಿದೆ ಅಂತ ಗೊತ್ತಿದೆ ಅಬ್ರಾಹಂ ಮೇಲೆ ನ್ಯಾಯಾಲಯ ಸಾಕಷ್ಟು ದಂಡ ಹಾಕಿದೆ ಎಂದರು.
ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಕಿರುಕುಳ ನೀಡುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ರಾಜ್ಯದಲ್ಲಿದೆ. ಸಿಎಂ ಸಿದ್ಧರಾಮಯ್ಯಗೆ ತೊಂದರೆ ಕೊಡಲು ಯತ್ನ ನಡೆಯುತ್ತಿದೆ. ಹಾಗಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ನೋಟಿಸ್ ವಾಪಸ್ ಪಡೆಯಬೇಕು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ ಮಾಡಿದರು.