ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ ತಾಲೂಕಿನ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಎಲ್ಲಾ ಅಂಗನವಾಡಿ, ಶಾಲೆಗಳೂ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಇನ್ನು ದಾವಣಗೆರೆ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.