ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಹಗರಣ ಸಂಬಂಧ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಹೌದು ಈ ಮೊದಲು ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದಿದ್ದ ಗೃಹ ಸಚಿವರು ಇದೀಗ ಉಲ್ಟಾ ಹೊಡೆದಿದ್ದಾರೆ.
ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸರ್ಕಾರ ಇದೀಗ ಯೂಟರ್ನ್ ಹೊಡೆದಿದೆ.ಈ ಕುರಿತು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.
ಪಾದಯಾತ್ರೆ ಕುರಿತಂತೆ ಕೆಲವು ದಿನಗಳ ಹಿಂದಷ್ಟೇ ಜಿ ಪರಮೇಶ್ವರ್ ಅವರು ಯಾವುದೇ ಕಾರಣಕ್ಕೂ ಸರ್ಕಾರದಿಂದ ಅನುಮತಿ ನೀಡುವುದಿಲ್ಲ. ಅವರು ಬೇಕಾದರೆ ತಮ್ಮ ಪಾಡಿಗೆ ತಾವು ಪಾದಯಾತ್ರೆ ಮಾಡಿಕೊಳ್ಳಲಿ.ಆದರೆ ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ನೀಡಲ್ಲ ಎಂದಿದ್ದರು. ಇನ್ನು ಈ ವಿಷಯವಾಗಿ ಇಂದು ಬೆಳಿಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಬೆಂಗಳೂರಿನಲ್ಲಿ ಪಾದಯಾತ್ರೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದರು.