ಮಡಿಕೇರಿ: ರಾಜ್ಯದ ಲಕ್ಷಾಂತರ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು 2000 ರೂ ಹಣಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ಹಣದ ನಿರೀಕ್ಷೆಯಲ್ಲಿದ್ದಂತ ಗೃಹ ಲಕ್ಷ್ಮೀಯರಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಭರವಸೆ ನೀಡಿದ್ದಾರೆ. ಒಟ್ಟಿಗೆ 2000 ರೂ ಹಣವನ್ನು ಹಾಕುವುದಾಗಿ ಹೇಳಿದ್ದಾರೆ.
ಮಡಿಕೇರಿಯಲ್ಲಿ ನೆರೆಹಾನಿಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇ ತಿಂಗಳವರೆಗೆ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಯಜಮಾನಿಯರಿಗೆ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಎರಡು ತಿಂಗಳು ಪಾವತಿ ಮಾಡುವುದು ಬಾಕಿ ಇದೆ ಎಂದರು.
ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣ ಪಾವತಿಗೆ ಕ್ರಮ ವಹಿಸಲಾಗಿದೆ. ಮೇ ತಿಂಗಳ ಗೃಹ ಲಕ್ಷ್ಮೀ ಯೋಜನೆ ಹಣದ ನಂತ್ರ ಜೂನ್, ಜುಲೈ ತಿಂಗಳ 2000 ಹಣವನ್ನು ಒಟ್ಟಿಗೆ ಪಾವತಿ ಮಾಡುವಂತೆ ಸೂಚಿಸಲಾಗಿದೆ. ಕೆಲವೇ ದಿನಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಯಜಮಾನಿಯರ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಅಭಯ ನೀಡಿದರು.
BREAKING : CBSE 12ನೇ ತರಗತಿ ‘ಕಂಪಾರ್ಟ್ಮೆಂಟ್ ಪರೀಕ್ಷೆ’ಯ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ!