ಬೆಂಗಳೂರು : ಮುಡಾ ಹಗರಣ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಇಂದಿನಿಂದ ಆರಂಭವಾಗಲಿದೆ.
ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಹಾಗೂ ಜೆಡಿಎಸ್ ಮೈಸೂರಿನವರೆಗೆ ಒಟ್ಟು ಏಳು ದಿನಗಳ ಪಾದಯಾತ್ರೆ ಹಮ್ಮಿಕೊಂಡಿದ್ದು, 8ನೇ ದಿನ ಆ.10ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಮೂಲಕ ಅಂತ್ಯಗೊಳ್ಳಲಿದೆ.
ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಹಗರಣಗಳ ಬಗ್ಗೆ ಅದರಲ್ಲೂ ಮೈಸೂರು ಅಭಿವೃದಿ ಪ್ರಾಧಿಕಾರದ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಸ್ತಾಪಿಸಿ ಸಿಬಿಐ ತನಿಖೆಗೆ ನೀಡುವುದರ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿದ ಪ್ರತಿಪಕ್ಷಗಳು ಮೈಸೂರಿಗೆ ಪಾದಯಾತ್ರೆ. ನಡೆಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದವು. ನಂತರ ಅ.ರಿಂದ ಪಾದಯಾತ್ರೆಯನ್ನೂ ಘೋಷಿಸಲಾಗಿತ್ತು.
ಬಳಿಕ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾತ್ರೆಗೆ ಸಂಬಂಧಿಸಿದಂತೆ ಗೊಂದಲ ಉಂಟಾಗಿ ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಕೊನೆಯ ಕ್ಷಣದಲ್ಲಿ ಬಿಜೆಪಿ ವರಿಷ್ಠರ ಮಧ್ಯೆ ಪ್ರವೇಶದಿಂದ ಗೊಂದಲ ಬಗೆಹರಿದು ನಿಗದಿತ ದಿನದಿಂದೆ ಪಾದಯಾತ್ರೆ ಆರಂಭವಾಗುವಂತಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶಬಾಬು, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿರಲಿದ್ದಾರೆ. ಆ.10ರಂದು ಬೆಳಗ್ಗೆ 10.30ಕ್ಕೆ ಮೈಸೂರಿ ನಲ್ಲಿ ಬೃಹತ್ ಸಮಾರೋಪ ಸಮಾರಂಭ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ.