ಬೆಂಗಳೂರು : ಮುಡಾ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಜೆಡಿಎಸ್ ಇಂದು ಬೆಂಗಳೂರಿನ ಕೆಂಗೇರಿಯಿಂದ ಪಾದಯಾತ್ರೆ ಆರಂಭಿಸುತ್ತಿದ್ದು ಈ ಒಂದು ಪಾದಯಾತ್ರೆಗೆ ರಕ್ಷಣೆ ನೀಡಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಬಿಜೆಪಿ ಪಾದಯಾತ್ರೆಗೆ ಅನುಮತಿಗಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಸಲ್ಲಿಸಿದ್ದರು. ಆ. 3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಅನುಮತಿ ಕೇಳಿದರೂ ಸರ್ಕಾರ ಪ್ರತಿಕ್ರಿಯಿಸಿಲ್ಲ. ಹೀಗಾಗಿ ಅನುಮತಿ ನೀಡಲು ನಿರ್ದೇಶಿಸುವಂತೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಮೊದಲೆ ಸರಕಾರ ಪಾದಯಾತ್ರೆಗೆ ಅನುಮತಿ ನೀಡಿದೆ.
ಆದರೆ ಕೋರ್ಟ್ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಮೊದಲೆ ಸರಕಾರ ಪಾದಯಾತ್ರೆಗೆ ಅನುಮತಿ ನೀಡಿದೆ. ಇದೀಗ ಕೋರ್ಟ್, ಕಾನೂನು ಪ್ರಕಾರ ಪಾದಯಾತ್ರೆ ಭದ್ರತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ರಾಮನಗರ, ಮಂಡ್ಯ ಎಸ್ಪಿ ಹಾಗೂ ಮೈಸೂರು ಪೊಲೀಸ್ರಿಗೆ ಸೂಚಿಸಿದೆ.
ಇನ್ನು ಇಂದು ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಿಂದ ಪಾದಯಾತ್ರೆಗೆ ಚಾಲನೆ ದೊರಕಲಿದ್ದು, ಏಳು ದಿನಗಳ ಕಾಲ ಪಾದಯಾತ್ರೆ ನಡೆಸಿ ಆಗಸ್ಟ್ 10ರಂದು ಮೈಸೂರಿನಲ್ಲಿ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಈ ಒಂದು ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.