ಯಾದಗಿರಿ : ಯಾದಗಿರಿಯ ಸೈಬರ್ ಠಾಣೆಯ ಪಿಎಸ್ಐ ಆಗಿದ್ದ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯಾದಗಿರಿ ಠಾಣೆಯಲ್ಲಿ ಶಾಸಕ ಚೆನ್ನರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಜಾತಿನಿಂದನೆ ಆರೋಪದ ಅಡಿ ಎಫ್ಐಆರ್ ದಾಖಲಿಸಲಾಗಿದೆ.
ಹೌದು ಪಿಎಸ್ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯಾದಗಿರಿ ಪೊಲೀಸ್ ಠಾಣೆಯಲ್ಲಿ A1 ಆರೋಪಿಯಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್, ಹಾಗೂ A 2 ಆರೋಪಿಯಾಗಿ ಪುತ್ರ ಪಂಪನಗೌಡ ವಿರುದ್ಧ FIR ದಾಖಲಾಗಿದೆ. ವರ್ಗಾವಣೆಗೆ ಸಂಬಂಧಪಟ್ಟಂತೆ ಶಾಸಕ ಚೆನ್ನಾರೆಡ್ಡಿ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಪರಶುರಾಮ್ ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜಾತಿನಿಂದನೆ ಆರೋಪದ ಅಡಿ ಇದೀಗ FIR ದಾಖಲಾಗಿದೆ. ಘಟನೆ ನಡೆದು 17 ಗಂಟೆಗಳ ಬಳಿಕ ಪೊಲೀಸರು ಪಿಎಸ್ಐ ಪರಶುರಾಮ್ ಪತ್ನಿ ಶ್ವೇತ ಅವರ ದೂರು ಆಧರಿಸಿ ಇದೀಗ ಕೇಸ್ ದಾಖಲಿಸಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮೃತ ಪರಶುರಾಮ್ ಪತ್ನಿ ಶ್ವೇತಾ ಅವರು, ವರ್ಗಾವಣೆಗೆ ಸಂಬಂಧಿಸಿದಂತೆ ದುಡ್ಡು ಅಂತ ಶಾಸಕ ಚನ್ನಾರೆಡ್ಡಿ ಮಾನಸಿಕ ಹಿಂಸೆ ನೀಡಿದ್ದರು. ಹಾಗಾಗಿ ನನ್ನ ಗಂಡ ಸಾವನಪ್ಪಿದ್ದಾರೆ ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.