ಬಳ್ಳಾರಿ: ಜಿಲ್ಲೆಯಲ್ಲಿ ಶಾಲಾ ಅವಧಿಯಲ್ಲೇ ವಿದ್ಯಾರ್ಥಿಗಳು ವಿಷಕಾರಿ ಬೀಜದ ಹಣ್ಣು ಸೇವಿಸಿದ್ದರಿಂದ, ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶಾಲಾ ವಿರಾಮದ ಸಂದರ್ಭದಲ್ಲಿ ವಿಷಕಾರಿ ಬೀಜವಿರುವಂತ ಕಾಡು ಹಣ್ಣುಗಳನ್ನು ಸೇವಿಸಿದ್ದಾರೆ. ಈ ಹಣ್ಣುಗಳನ್ನು ತಿಂದ ಕೂಡಲೇ, ಅಸ್ವಸ್ಥಗೊಂಡಿದ್ದಾರೆ.
ವಿದ್ಯಾರ್ಥಿಗಳು ವಿಷಕಾರಿ ಬೀಜಗಳನ್ನು ತಿಂದು ಅಸ್ವಸ್ಥಗೊಂಡ ವಿಷಯ ತಿಳಿದಂತ ಶಿಕ್ಷಕರು, ಕೂಡಲೇ ಅವರನ್ನು ಸಮೀಪದ ಪ್ರಾಥಮಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆ ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಇದೀಗ ವಿಷದ ಬೀಜದ ಹಣ್ಣುಗಳನ್ನು ಸೇವಿಸಿ, ವಾಂತಿ, ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಸಂಪೂರ್ಣ ಗುಣಮುಖರಾದ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂಬುದಾಗಿ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ತಿಳಿಸಿದ್ದಾರೆ.
ಆ.23ರಂದು ದೇಶದ ಮೊದಲ ಕೆಎಚ್ಐಆರ್ ಸಿಟಿ ಯೋಜನೆಗೆ ಚಾಲನೆ: ಸಚಿವ ಎಂ.ಬಿ ಪಾಟೀಲ್
ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ