ಬೆಂಗಳೂರು: ನಗರದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಂತ ಯುವಕನೊಬ್ಬ ಹಳಿಗಳ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ದೊಡ್ಡಕಲ್ಲಸಂದ್ರದಲ್ಲಿ ನಡೆದಿದೆ. ಹೀಗಾಗಿ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಕೂಡ ಉಂಟಾಗಿದೆ.
ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳಿಗಳ ಮೇಲೆ ಹಾರಿದಂತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಕೋಣನಕುಂಟೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯಿಂದ ನಮ್ಮ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ವ್ಯತ್ಯಯ ಉಂಟಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
‘ಭ್ರಷ್ಟಾಚಾರ’ವೇ ನಿಮ್ಮ ತಾಯಿ-ತಂದೆ, ನಿಮ್ಮ ಬಂಧು ಬಳಗ: ‘BJP-JDS ನಾಯಕ’ರಿಗೆ ‘DKS’ ಕುಟುಕು
ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ