ಬೆಂಗಳೂರು: ಮುಡಾ ಹಗರಣ ಸಂಬಂಧ ಜನನಾಯಕ ಸಿದ್ಧರಾಮಯ್ಯ ಅವರ ತೇಜೋವಧೆ ಮಾಡಲಾಗುತ್ತಿದೆ. ರಾಜ್ಯಪಾಲರ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂಬುದಾಗಿ ಆರೋಪಿಸಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಆಗಸ್ಟ್.5ರಂದು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾವೆ.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖಂಡ ಅನಂತ್ ನಾಯ್ಕ್.ಎನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 05-08-2024ರಂದು ಜನನಾಯಕ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ, ರಾಜ್ಯಪಾಲರ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಷಡ್ಯಂತರವನ್ನು ವಿರೋಧಿಸಿ ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು.
ನಾಡಿನ ಪ್ರಜ್ಞಾವಂತ, ಜನಪರ, ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯ, ಸಂಘಟನೆಗಳ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ನಿಮ್ಮ ನಿಮ್ಮ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಈ ಪ್ರತಿಭಟನೆ ಹೋರಾಟದಲ್ಲಿ ಭಾಗವಹಿಸಲು ವಿನಂತಿಸಿದ್ದಾರೆ.
ಈ ವೇಳೆಯಲ್ಲಿ ಕೆ.ಎಂ ರಾಮಚಂದ್ರಪ್ಪ, ಮಾವಳ್ಳಿ ಶಂಕರ್ ಸೇರಿದಂತೆ ಬೆಂಗಳೂರಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿವಿಧ ಮುಖಂಡರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಿದ್ಧರಾಮಯ್ಯ ತೇಜೋವಧೆ ಮಾಡೋದಕ್ಕೆ ಬಿಜೆಪಿ ಇಳಿದಿದೆ, ಅದು ಎಂದೂ ಸಾಧ್ಯವಿಲ್ಲ: ಎಲ್.ಹನುಮಂತಯ್ಯ
BREAKING: ಬೆಂಗಳೂರಲ್ಲಿ ನಟೋರಿಯಸ್ ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು, ಅರೆಸ್ಟ್ | Police Firing