ಬೆಂಗಳೂರು : ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮುಗಿಯುಷ್ಟರಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆನೀಡ ಮನೆಗೆ ಹೋಗುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಶನಿವಾರ ಮೈಸೂರು ಚಲೋ ಪಾದಯಾತ್ರೆಯು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದರಾಮಯ್ಯ ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದ್ದಾರೆ. ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬದಲಾವಣೆಗೆ ಅವರೇ ಮುಂಚೂಣಿಯಲ್ಲಿರಬೇಕು ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹಗರಣಗಳಲ್ಲಿ ಮುಳುಗಿದೆ. ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವುದು ನಿಶ್ಚಿತ. ಬಿಜೆಪಿ ಜೆಡಿಎಸ್ ಪಕ್ಷಗಳ ಜಂಟಿ ಪಾದಯಾತ್ರೆ ಯಶಸ್ವಿಯಾಗುವುದು ನಿಶ್ಚಿತ. ಮುಂದಿನ ದಿನಗಳಲ್ಲಿ ಎನ್ಡಿಎ ಮೈತ್ರಿಕೂಟ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.