ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಮತ್ತೊಂದು ಮಹತ್ವದ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿದೆ. ಈ ಮೂಲಕ ನಟ ದರ್ಶನ್ ವಿರುದ್ಧ ಮಹತ್ವದ ಸಾಕ್ಷ್ಯವನ್ನು ಸಂಗ್ರಹಿಸಲಿದೆ.
ಹೌದು, ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿರುವ ಪೊಲೀಸರು ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಸಿಸಿಟಿವಿ ವಿಡಿಯೋ ಜೊತೆಗೆ ಫೋಟೋ ಮ್ಯಾಚಿಂಗ್ ಮಾಡಲು ಮುಂದಾಗಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಸಂಗ್ರಹಿಸಿರುವ ಸಿಸಿಟಿವಿ ದೃಶ್ಯಗಳ ವಿಶೂವಲ್ ಕಂಪ್ಯಾರಿಸನ್ ಗೆ ಎಫ್ ಎಸ್ ಎಲ್ ಗೆ ಕಳುಹಿಸಲಾಗಿದ್ದು, ಸಿಸಿಟಿವಿ ದೃಶ್ಯದ ಜೊತೆಗೆ ಆರೋಪಿಗಳ ಫೋಟೋಗಳನ್ನು ಕಳುಹಿಸಲಾಗಿದೆ. ಇದರಲ್ಲಿ ಎಲ್ಲಾ ಆರೋಪಿಗಳ ಕಣ್ಣು, ಬಣ್ಣ, ದೇಹ, ಬಾಯಿ, ತುಟಿ, ಮೂಗಿನ ಶೇಪ್ ಗಳ ಕಂಪ್ಯಾರಿಸನ್ ಮಾಡಲು ಮುಂದಾಗಿದೆ ಎನ್ನಲಾಗಿದೆ.