ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕೋಲಾರ-ಬಂಗಾರಪೇಟೆ ರಸ್ತೆಯಲ್ಲಿ ನಡೆದಿದೆ.
20 ರಿಂದ 22 ವರ್ಷದೊಳಗಿನ ನಾಲ್ವರು ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದರು. ಮೃತರನ್ನು ಹಾಸನದ ಹರ್ಷವರ್ಧನ್, ಬಳ್ಳಾರಿಯ ಬಸವನಗೌಡ ಮತ್ತು ಕೋಲಾರದ ಬಂಗಾರಪೇಟೆಯ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಸಾಯಿ ಗಗನ್ ಅವರು ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ್ದರು.
ಮುಂಜಾನೆ 2.30 ರ ಸುಮಾರಿಗೆ ನಾಲ್ವರು ಕೋಲಾರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.