ರಾಯಚೂರು : ರಾಯಚೂರಲ್ಲಿ ಭೀಕರ ಅಪಘಾತ ಒಂದು ನಡೆದಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ಹಳ್ಳದ ಸೇತುವೆ ತಡೆಗೋಡೆಗೆ ಸರ್ಕಾರಿ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಹೌದು ಮಾನ್ವಿ- ಸಿಂಧನೂರು ಮಾರ್ಗದ ಬಸ್ ಇದಾಗಿದ್ದು, ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಇಳಿದಿದೆ. ಇನ್ನು ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಕೂಡಲೇ ಗಾಯಾಳುಗಳಿಗೆ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.