ರಾಮನಗರ: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದುಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಡಿಕೆಶಿಗೆ ಚಳಿ ಬಿಡಿಸಿದರು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.
ಸರ್ಕಾರದ ಬಗ್ಗೆ ನಮಗೆ ಅಸೂಯೆ ಇಲ್ಲ
ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೀತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು.
ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿತ್ತು ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟಾಂಗ್ ಕೊಟ್ಟರು ಅವರು.
ಮೂಡಾ ಬಗ್ಗೆ ದಾಖಲೆ ಸಮೇತ ಮಾತನಾಡಿದ್ದೇವೆ
ಮೂಡಾ ಬಗ್ಗೆ ನಾನು, ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತನಾಡಿದೇವೆ. ಮೈಸೂರು ನಗರದ ಉಸ್ತುವಾರಿಯನ್ನು ಸಿಎಂ ಅವರೇ ವಹಿಸಿಕೊಂಡಿದ್ದಾರೆ. ಸಿಎಂ ತಮ್ಮ ಪತ್ನಿ ಹೆಸರಲ್ಲಿ 15 ಸೈಟು ಪಡೆಯಲು ನಮ್ಮ ವಿರೋಧ ಇಲ್ಲ. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಸೈಟು ಪಡೆದಿದ್ದಾರೆ. ಇಲ್ಲಿ ನಿಂಗ, ಜವರ, ದೇವರಾಜ, ದಲಿತ ಅನ್ನೋ ಪ್ರಶ್ನೆ ಇಲ್ಲ. ನಕಲಿ ದಾಖಲೆ ಸೃಷ್ಟಿ 15 ಸೈಟುಗಳನ್ನು ತಗೊಂಡಿದ್ದಾರೆ. ಇದನ್ನು ಸಿಎಂ ಕಾನೂನು ಬಾಹಿರವಾಗಿ ತಗೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.
ಡಿಕೆಶಿ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ; ಏಕವಚನ ನನಗೂ ಬರುತ್ತದೆ
ಡಿಸಿಎಂ ಡಿಕೆ ಶಿವಕುಮಾರ್ ಅವರು ಏನು ಪ್ರಶ್ನೆಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಬಗ್ಗೆ, ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದು ಎಚ್ಚರಿಕೆ ಕೊಟ್ಟರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ’ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಸಿ.ಸಿ.ಪಾಟೀಲ್, ಎ.ಮಂಜು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದರಾದ ಡಾ.ಡಾ.ಸಿ.ಎನ್.ಮಂಜುನಾಥ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಕೃಷ್ಣಪ್ಪ, ಹರೀಶ್ ಗೌಡ, ಮಾಜಿ ಶಾಸಕ ಮಂಜುನಾಥ್ ಸೇರಿದಂತೆ ಎರಡೂ ಪಕ್ಷಗಳ ಶಾಸಕರು, ಸಂಸದರು, ನಾಯಕರು, ಅಸಂಖ್ಯಾತ ಕಾರ್ಯಕರ್ತರು ನಮ್ಮ ಜತೆಯಲ್ಲಿ ಇದ್ದರು.
BIG NEWS: ‘ಸಿಎಂ ಬದಲಾವಣೆ’ಯೂ ಇಲ್ಲ, ‘ಸಂಪುಟ ಪುನರ್ ರಚನೆ’ಯೂ ಇಲ್ಲ: ಸಿದ್ಧರಾಮಯ್ಯ ಸ್ಪಷ್ಟನೆ | CM Siddaramaiah